ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಯನ್ನು ನಿಂದಿಸಿ ಅವಾಚ್ಯ ಶಬ್ದಗಳನ್ನು ಬಳಸಿ ವಿಡಿಯೋ ಹರಿಬಿಟ್ಟಿದ್ದ ಯುವಕನನ್ನು ಬಾಣಸವಾಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಗರದ ಹಡ್ಸನ್ ಎಂಬಾತ ಪ್ರಧಾನಿ ಮೋದಿ ಅವರನ್ನು ನಿಂದಿಸಿ ವಿಡಿಯೋ ಮಾಡಿದ್ದ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಸಂಬಂಧ ಆತನ ವಿರುದ್ಧ ಎಫ್‌ಐಆರ್ ಕೂಡ ದಾಖಲಾಗಿತ್ತು.
ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಸರ್ವಜ್ಞನಗರ ಬಿಜೆಪಿ ಘಟಕ ಬಾಣಸವಾಡಿ ಪೊಲೀಸ್ ಠಾಣೆಗೆ ದೂರು ನೀಡಿತ್ತು. ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹಡ್ಸನ್‌ನನ್ನು ವಶಕ್ಕೆ ಪಡೆದಿದ್ದಾರೆ.
ಸದ್ಯ ಹಡ್ಸನ್‌ನನ್ನು ವಿಚಾರಣೆ ನಡೆಸುತ್ತಿರುವ ಬಾಣಸವಾಡಿ ಪೊಲೀಸರು, ವಿಡಿಯೋ ಮಾಡಿರುವುದು ಹಾಗೂ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವುದಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.
ಇದನ್ನೂ ಓದಿ : ಕೃಷ್ಣಾ ನದಿಯಲ್ಲಿ ಪಂಪ್‌ಸೆಟ್ ವಾಲ್ ತಿರುಗಿಸಲು ಹೋಗಿ ವ್ಯಕ್ತಿ ಸಾವು!



















