ನವದೆಹಲಿ: ಪಾಕಿಸ್ತಾನದ (Pakistan) ಗುಪ್ತಚರರೊಂದಿಗೆ ಮಾಹಿತಿ ಹಂಚಿಕೊಂಡ ಹರಿಯಾಣ ಮೂಲದ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಸೇರಿದಂತೆ 6 ಜನರನ್ನು ಬಂಧಿಸಲಾಗಿದೆ.
ಕಮಿಷನ್ ಏಜೆಂಟ್‌ಗಳ ಮೂಲಕ ವೀಸಾ ಪಡೆದ ನಂತರ ಜ್ಯೋತಿ ಮಲ್ಹೋತ್ರಾ (Jyoti Malhotra) 2023ರಲ್ಲಿ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದರು. ನಂತರ ನವದೆಹಲಿಯ ಪಾಕಿಸ್ತಾನ ಹೈಕಮಿಷನ್‌ನ ಸಿಬ್ಬಂದಿ ಸದಸ್ಯ ಎಹ್ಸಾನ್-ಉರ್-ರಹೀಮ್(Ehsan-ur-Rahim) ಅಲಿಯಾಸ್ ಡ್ಯಾನಿಶ್ ಅವರೊಂದಿಗೆ ನಿಕಟ ಸಂಬಂಧ ಬೆಳೆಸಿಕೊಂಡು ಮಾಹಿತಿ ನೀಡಿದ್ದರು ಎನ್ನಲಾಗಿದೆ.
ಆಪರೇಷನ್ ಸಿಂಧೂರ್ ನಡೆದ ಕೆಲವು ದಿನಗಳ ನಂತರ, ಪಾಕಿಸ್ತಾನದ ಕಾರ್ಯಕರ್ತರಿಗೆ ಸೂಕ್ಷ್ಮ ಮಾಹಿತಿ ಹಂಚಿಕೆ ಮಾಡಿದ ಹಿನ್ನೆಲೆಯಲ್ಲಿ ಸದ್ಯ ಜ್ಯೋತಿ ಸೇರಿದಂತೆ 6 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
“ಟ್ರಾವೆಲ್ ವಿತ್ ಜೋ” ಎಂಬ ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದ ಆರೋಪಿ ಜ್ಯೋತಿ, 2023ರಲ್ಲಿ ಕಮಿಷನ್ ಏಜೆಂಟ್‌ಗಳ ಮೂಲಕ ವೀಸಾ ಪಡೆದ ನಂತರ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ ಎಂದು ತಿಳಿದು ಬಂದಿದೆ.