ಬೆಂಗಳೂರು : ಸಚಿವ ಜಮೀರ್ ಅಹ್ಮದ್ ಖಾನ್ ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಜಮೀರ್ ಪಿಎ ಸರ್ಧಾರ್ ಸರ್ಫಾಜ್ ಖಾನ್ ಮನೆ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ.
ಬೆಂಗಳೂರಿನ ಹಲಸೂರು ಮನೆ ಸೇರಿದಂತೆ 10 ಕಡೆ ಲೋಕಾ ಅಧಿಕಾರಿಗಳು ಪರಿಶೀಲನೆ ಮಾಡುತ್ತಿದ್ದಾರೆ. ಕೊಡಗಿನ ಮನೆ ರೆಸಾರ್ಟ್ ಮೇಲೂ ದಾಳಿಯಾಗಿದೆ. ಲೋಕಾಯುಕ್ತ ಎಸ್ ಪಿ ಶಿವಪ್ರಕಾಶ್ ದೇವರಾಜ್ ನೇತೃತ್ವದಲ್ಲಿ ಪರಿಶೀಲನೆ ನಡೆಯುತ್ತಿದೆ.
ನಿನ್ನೆಯಷ್ಟೇ ಚಿಕ್ಕಜಾಲ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಶಿವಣ್ಣ, ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕೇಸ್ ಒಂದರ ವಿಚಾರವಾಗಿ 50 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಟ್ರ್ಯಾಪ್ ಮಾಡಿ ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದರು ಇದೀಗ ಲೋಕಾ ಕಣ್ಣು ಸಚಿವ ಜಮೀರ್ ಅಹ್ಮದ್ ಖಾನ್ ಮನೆ ಮೇಲೆ ಬಿದ್ದಿದೆ.
ಇದನ್ನೂ ಓದಿ : ರೆಡ್ ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಚಿಕ್ಕಜಾಲ ಸಬ್ ಇನ್ಸ್‌ಪೆಕ್ಟರ್



















