ಶಿವಮೊಗ್ಗ : ನೀವು ಶಿವಮೊಗ್ಗ ಜಿಲ್ಲೆಯವರಾಗಿದ್ದು, ನಿಮ್ಮ ಜಿಲ್ಲೆಯಲ್ಲಿಯೇ ಉದ್ಯೋಗ ಹುಡುಕುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸಿಹಿ ಸುದ್ದಿ ಇಲ್ಲಿದೆ. ಶಿವಮೊಗ್ಗದ ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿ ಇರುವ 2 ಹುದ್ದೆಗಳ ನೇಮಕಾತಿಗಾಗಿ (Zilla Panchayat Shivamogga Recruitment 2026) ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬಿಲ್ ಕಲೆಕ್ಟರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಜಿಲ್ಲಾ ಪಂಚಾಯಿತಿ, ಶಿವಮೊಗ್ಗ
ಹುದ್ದೆ ಹೆಸರು: ಬಿಲ್ ಕಲೆಕ್ಟರ್
ಒಟ್ಟು ಹುದ್ದೆ: 52
ಉದ್ಯೋಗ ಸ್ಥಳ: ಶಿವಮೊಗ್ಗ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಸೆಪ್ಟೆಂಬರ್ 25
21 ಬಿಲ್ ಕಲೆಕ್ಟರ್ ಹಾಗೂ 31 ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಪಿಯುಸಿ ಅಥವಾ ಡಿಪ್ಲೋಮಾ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಹುದಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ನಡೆಸಲಾಗುತ್ತದೆ. ನಂತರ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 40 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸೋದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ shivamogga.nic.in ಗೆ ಭೇಟಿ ನೀಡಬೇಕು.
ನಿಮಗೆ ಬೇಕಾದ ಹುದ್ದೆಯ ವಿಭಾಗವನ್ನು ಆಯ್ಕೆ ಮಾಡಬೇಕು.
ಹುದ್ದೆಯ ಅಧಿಸೂಚನೆ ಓದಬೇಕು
ಅರ್ಜಿಯ ಪ್ರಿಂಟೌಟ್ ತೆಗದುಕೊಂಡು ಭರ್ತಿ ಮಾಡಬೇಕು
ಭರ್ತಿ ಮಾಡಿದ ಅರ್ಜಿ ಹಾಗೂ ದಾಖಲೆಗಳನ್ನು ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಬೇಕು
ಅರ್ಜಿ ಸಲ್ಲಿಸಬೇಕಾದ ವಿಳಾಸ
Principal Secretary to the Government, Department of Rural Development and Panchayat Raj, Multi-Storey Building, Bangalore 560001.
ಇದನ್ನೂ ಓದಿ : ಜಿಲ್ಲಾ ನ್ಯಾಯಾಲಯದಲ್ಲಿ 24 ಟೈಪಿಸ್ಟ್ ಹುದ್ದೆಗಳ ನೇಮಕಾತಿ : 67 ಸಾವಿರ ರೂ. ಸಂಬಳ



















