ಮುಂಬಯಿ: ಬಾಂಗ್ಲಾದೇಶದಲ್ಲಿ(bangladesh violence) ಆತಂಕದ ವಾತಾವರಣ ಇರುವ ಹಿನ್ನೆಲೆಯಲ್ಲಿ ಮಹಿಳಾ ಟಿ20 ವಿಶ್ವಕಪ್(ICC Women’s T20 World Cup) ಪಂದ್ಯಾವಳಿಯನ್ನು ಆಯೋಜಿಸಲು ಐಸಿಸಿ ಪರ್ಯಾಯ ಸ್ಥಳ ಹುಡುಕುತ್ತಿದ್ದು, ಜಿಂಬಾಬ್ವೆ ಮುಂದೆ ಬಂದಿದೆ ಎನ್ನಲಾಗಿದೆ.
ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ಈ ಪಂದ್ಯಾವಳಿಗೆ ಭಾರತ ಆತಿಥ್ಯ ವಹಿಸುವುದಿಲ್ಲ ಎಂದು ಹೇಳಿದ್ದರ ಬೆನ್ನಲ್ಲಿಯೇ ಜಿಂಬಾಬ್ವೆ ಟೂರ್ನಿಯ ಆತಿಥ್ಯ ವಹಿಸಿಕೊಳ್ಳಲು ಮುಂದೆ ಬಂದಿದೆ ಎಂದು ವರದಿಯೊಂದು ಹೇಳಿದೆ. ಈ ವಿಷಯವಾಗಿ ಗುರುವಾರವಷ್ಟೇ ಮಾತನಾಡಿದ್ದ ಜಯ್ ಶಾ, “ಮಹಿಳಾ ಟಿ20 ವಿಶ್ವಕಪ್ ಆಯೋಜನೆಗೆ ಐಸಿಸಿ ನಮ್ಮನ್ನು ಸಂಪರ್ಕಿಸಬಹುದು. ಆದರೆ ನಾವು ನಿರಾಕರಿಸುತ್ತೇವೆ ಎಂದಿದ್ದರು.
ಬಾಂಗ್ಲಾದೇಶದಲ್ಲಿ ಸದ್ಯಕ್ಕೆ ಶಾಂತಿ ನೆಲೆಸುವಂತೆ ಕಾಣುತ್ತಿಲ್ಲ ಹೀಗಾಗಿ ಐಸಿಸಿ ಪರ್ಯಾಯ ಸ್ಥಳದ ಹುಡುಕಾಟ ನಡೆಸುತ್ತಿದೆ. ವೇಳಾಪಟ್ಟಿಯಂತೆ ಈ ಟೂರ್ನಿ ಅಕ್ಟೋಬರ್ ನಲ್ಲಿ ಆರಂಭವಾಗಬೇಕಿದೆ. ಶೇಕ್ ಹಸೀನಾ ರಾಜೀನಾಮೆ ನೀಡಿ ಪಲಾಯನ ಮಾಡಿದ ನಂತರ ಅಲ್ಲಿನ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ದಾಳಿ ನಡೆದಿದೆ. ಹಿಂದೂಗಳ ಮನೆಗಳು, ವ್ಯವಹಾರಗಳು ಮತ್ತು ದೇವಾಲಯಗಳನ್ನು ಗುರಿಯಾಗಿಸಿಕೊಂಡು ನಡೆದ ಹಿಂಸಾಚಾರದಲ್ಲಿ ಶಾಲಾ ಶಿಕ್ಷಕರೊಬ್ಬರು ಸಾವನ್ನಪ್ಪಿದ್ದು, ಕನಿಷ್ಠ 45 ಜನರು ಗಾಯಗೊಂಡಿದ್ದಾರೆ. ಬಾಂಗ್ಲಾದೇಶದ 17 ಕೋಟಿ ಜನಸಂಖ್ಯೆಯ ಸುಮಾರು 8 ಪ್ರತಿಶತ ಹಿಂದೂಗಳಿದ್ದಾರೆ. ಇವರು ಸಾಂಪ್ರದಾಯಿಕವಾಗಿ ಶೇಖ್ ಹಸೀನಾ ಅವರ ಅವಾಮಿ ಲೀಗ್ ಪಕ್ಷದ ಬೆಂಬಲಿಗರು.
ಹೀಗಾಗಿ ಇವರನ್ನು ಗುರಿಯಾಗಿಸಿ ದಾಳಿ ನಡೆಸಲಾಗುತ್ತದೆ ಎಂದು ತಿಳಿದು ಬಂದಿದೆ. ಆದರೆ, ಈಗ ಬಾಂಗ್ಲಾದಲ್ಲಿ ಎಲ್ಲವೂ ಸರಿಯಿಲ್ಲ ಎನ್ನಲಾಗುತ್ತಿದೆ. ಇದರ ಮಧ್ಯೆ ಕ್ರೀಡಾಭಿಮಾನಿಗಳಿಗೆ ಸಂತಸ ಸಿಕ್ಕಿದೆ. ಹೇಗಾದರೂ ಸರಿ, ಎಲ್ಲಿಯಾದರೂ ಸರಿ ಕ್ರಿಕೆಡ್ ಟೂರ್ನಿ ನಡೆಯಲಿ ಎಂಬುವುದು ಅಭಿಮಾನಿಗಳ ಕನಸಾಗಿದೆ.